ಅಪ್ರಾಪ್ತ ಬಾಲಕನಿಗೆ ಪರವಾನಿಗೆ, ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸಲು ಅವಕಾಶ ನೀಡಿದ ದ್ವಿಚಕ್ರ ವಾಹನದ ಮಾಲೀಕರಿಗೆ ತೀರ್ಥಹಳ್ಳಿಯ ಸ್ಥಳೀಯ ನ್ಯಾಯಾಲಯ 20 ಸಾವಿರ ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ಪರವಾನಿಗೆ, ಹೆಲ್ಮೆಟ್ ಇಲ್ಲದೇ ವಾಹನ ಚಲಾಯಿಸಲು ಅವಕಾಶ ನೀಡಿದ ದ್ವಿಚಕ್ರ ವಾಹನದ ಮಾಲೀಕರಿಗೆ ತೀರ್ಥಹಳ್ಳಿಯ ಸ್ಥಳೀಯ ನ್ಯಾಯಾಲಯ 20 ಸಾವಿರ ರೂಪಾಯಿ ದಂಡ ವಿಧಿಸಿದೆ.
ಮಾಲೀಕ ಪ್ರಮೋದ್ ಎಸ್ ಕೆ 17 ವರ್ಷದ ಬಾಲಕನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ್ದರು.
ಇದನ್ನು ಓದಿ: ಮೈಸೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಯುವಕರ ದುರ್ಮರಣ
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾವತಿ ಬಳಿ ಜೂನ್ 19 ರಂದು ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಅವರು ವಾಹನ ತಪಾಸಣೆ ನಡೆಸುತ್ತಿದ್ದಾಗ 17 ವರ್ಷದ ಬಾಲಕನೊಬ್ಬ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸರು ಬೈಕ್ ಮಾಲೀಕ ಪ್ರಮೋದ್ ಎಸ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಮಾಲೀಕರ ತಪ್ಪಿತಸ್ಥ ಎಂದು ತೀರ್ಪು ನೀಡಿ, 20,000 ರೂ.ದಂಡ ವಿಧಿಸಿದ್ದಾರೆ.