Home Uncategorized ಶಿವಮೊಗ್ಗ ಗಲಾಟೆ: ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಭೇಟಿ, ಸರ್ಕಾರದ ವಿರುದ್ಧ ವಾಗ್ದಾಳಿ

ಶಿವಮೊಗ್ಗ ಗಲಾಟೆ: ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಭೇಟಿ, ಸರ್ಕಾರದ ವಿರುದ್ಧ ವಾಗ್ದಾಳಿ

38
0

ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಲು ಮೆಗ್ಗಾನ್ ಆಸ್ಪತ್ರೆಗೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಲು ಮೆಗ್ಗಾನ್ ಆಸ್ಪತ್ರೆಗೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಭೇಟಿ ನೀಡುವ ಮೂಲಕ ಕಲ್ಲು ತೂರಾಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ನಿನ್ನೆ ರಾತ್ರಿ ನಡೆದಿದ್ದ ಕಲ್ಲು ತೂರಾಟದಲ್ಲಿ 7 ಜನ ಗಾಯಗೊಂಡಿದ್ದರು. ರೋಹನ್, ಧನಂಜಯ್, ಮಾರುತಿ, ಪ್ರದೀಪ್, ಕಿರಣ್, ಭರತ್, ಶಾಂತಮ್ಮಗೆ ಮೆಗ್ಗಾನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವೇಳೆ ಗಾಯಾಳುಗಳನ್ನು ವಿಚಾರಿಸಿದ ಈಶ್ವರಪ್ಪ ಘಟನೆ ಕುರಿತು ಮಾಹಿತಿ ಪಡೆದರು.

ಇದನ್ನೂ ಓದಿ: ಶಿವಮೊಗ್ಗ ಗಲಭೆ ಕೇಸಿ​ನಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡುವುದಿಲ್ಲ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ: ಸಿಎಂ ಸಿದ್ದರಾಮಯ್ಯ

ಬಳಿಕ ಮಾತನಾಡಿದ ಅವರು, ನಿನ್ನೆ ನಡೆದ ಮುಸಲ್ಮಾನರ ಮೆರವಣಿಗೆ ರಾಜ್ಯ ಸರ್ಕಾರ ತಲೆ ತಗ್ಗಿಸಬೇಕು. ಮೆರವಣಿಗೆಯಲ್ಲಿ ಕೈಯಲ್ಲಿ ತಲ್ವಾರ್ ಹಿಡಿದುಕೊಂಡು ಹೋಗಿದ್ದರು. ಇದು ಯಾರಿಗೆ ಎಚ್ಚರಿಕೆ ಹಿಂದೂ ಸಮಾಜದವರಿಗಾ? ಪೊಲೀಸರು ಈ ಸರ್ಕಾರದಿಂದ ಹೆದರಿ ಹೋಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ವಿಜ್ಞಾನ, ತಂತ್ರಜ್ಞಾನ ಸಚಿವ ಬೋಸರಾಜ್, ‘ಶಿವಮೊಗ್ಗದಲ್ಲಿ ಆದ ಘಟನೆ ಘಟನೆ ಖಂಡಿಸುತ್ತೇನೆ. ಸರ್ಕಾರ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಕೆಲಸ ಸರ್ಕಾರ ಮಾಡುತ್ತಿದೆ. ಮುಂದೆ ಈ ರೀತಿ ಅಹಿತಕರ ಘಟನೆ ಆಗದಂತೆ ಸರ್ಕಾರ ಕ್ರಮಕೈಗೊಳ್ಳತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಒಂದು ಸಣ್ಣ ಗಲಭೆ ಆಗಿದೆ, ಅಹಿತಕರ ಘಟನೆ ನಡೆಯುವ ಮಾಹಿತಿಯಿತ್ತು, ಹೀಗಾಗಿ ಪೊಲೀಸ್ ಭದ್ರತೆ ಒದಗಿಸಿದ್ದೆವು: ಗೃಹ ಸಚಿವ ಪರಮೇಶ್ವರ್

60ಕ್ಕೂ ಹೆಚ್ಚು ಜನರು ವಶಕ್ಕೆ
ಇನ್ನು ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು.
 
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ, ಶಾಂತಿನಗರದಲ್ಲಿ ಪೊಲೀಸ್ ಹೈಅಲರ್ಟ್ ಆಗಿದ್ದಾರೆ. ಶಾಂತಿನಗರದ ಮುಖ್ಯ ರಸ್ತೆಯಲ್ಲಿ ಪೊಲೀಸರಿಂದ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬೈಕ್ ಸವಾರರನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸ್​​ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ​​
 

LEAVE A REPLY

Please enter your comment!
Please enter your name here