ಶಿವಮೊಗ್ಗ, ಜು.6: ಜಿಲ್ಲೆಯಲ್ಲಿ ಡೆಂಗಿ ಜ್ವರದ ಭೀತಿಯ ನಡುವೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದ್ದು, ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗದಲ್ಲಿ ಝೀಕಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದ ವೃದ್ಧರೊಬ್ಬರು ಮೃತಪಟ್ಟಿದ್ದರೆ, ಸಾಗರದಲ್ಲಿ ಯುವಕನೋರ್ವನಲ್ಲಿ ಝೀಕಾ ಸೋಂಕು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಶಿವಮೊಗ್ಗದ ಗಾಂಧಿ ನಗರದ ನಿವಾಸಿ 74 ವರ್ಷದ ವೃದ್ಧರೊಬ್ಬರು ಶುಕ್ರವಾರ ಮನೆಯಲ್ಲಿ ಮೃತಪಟ್ಟಿದ್ದಾರೆ. ಜೂನ್ 19ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರಲ್ಲಿ ಜೂ.21ರಂದು ಝೀಕಾ ವೈರಸ್ ಪತ್ತೆ ಆಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು ಗುಣಮುಖರಾಗಿ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದರು. ಆದರೆ ಗುಣಮುಖರಾದವರು ಶುಕ್ರವಾರ ಮನೆಯಲ್ಲಿ ಮೃಪಟ್ಟಿದ್ದಾರೆ. ಅವರು ಜ್ವರ ಮಾತ್ರವಲ್ಲದೇ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಸಾಗರ ಮೂಲದ 24 ವರ್ಷದ ಯುವಕನೊಬ್ಬನಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ.