Home Uncategorized ಶಿವಮೊಗ್ಗ | ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ: ರೌಡಿ ಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ | ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ: ರೌಡಿ ಶೀಟರ್ ಕಾಲಿಗೆ ಗುಂಡೇಟು

27
0

ಶಿವಮೊಗ್ಗ, ಡಿ.28: ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪದಲ್ಲಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಓಲಂಗನ ಕಾಲಿಗೆ ಪೊಲೀಸರು ಗುಂಡಿಕ್ಕಿದ ಘಟನೆ ಶಿವಮೊಗ್ಗ ಸೋಮಿನಕೊಪ್ಪ ಎಂಬಲ್ಲಿ ನಡೆದಿದೆ.

ಮೂರು ದಿನದ ಹಿಂದೆ ಫ್ರೀಡಂ ಪಾರ್ಕ್ ನಲ್ಲಿ ಶಶಿಕುಮಾರ್ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಜುನಾಥ್ ಅಲಿಯಾಸ್ ನನ್ನು ಬುಧವಾರ ಸಂಜೆ ಪೊಲೀಸರು ಬಂಧಿಸಿದ್ದರು. ರಾತ್ರಿ ವೇಳೆ ಸ್ಥಳ ಮಹಜರಿಗಾಗಿ ಆತನನ್ನು ಘಟನಾ ಸ್ಥಳಕ್ಕೆ ಕರೆದೊಯ್ದ ವೇಳೆ ಆತ ಡ್ರ್ಯಾಗರ್ನಿಂದ ಪೊಲಿಸರ ಮೇಲೆ ದಾಳಿ ನಡೆಸಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ವೇಳೆ ಜಯನಗರ ಠಾಣೆ ಇನ್ ಸ್ಪೆಕ್ಟರ್ ಸಿದ್ದೇಗೌಡ ಆತ್ಮರಕ್ಷಣೆಗಾಗಿ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಓಲಂಗನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಓಲಂಗನ ದಾಳಿಯಿಂದ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

LEAVE A REPLY

Please enter your comment!
Please enter your name here