Home Uncategorized ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಶಿವಮೊಗ್ಗ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

50
0

ಶಿವಮೊಗ್ಗ, ನ.15: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.

ಮಲ್ಲೇಶ್(35) ಕೊಲೆಯಾದ ಯುವಕ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

LEAVE A REPLY

Please enter your comment!
Please enter your name here