Home Uncategorized ಶಿವಮೊಗ್ಗ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ; 21 ವರ್ಷದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಶಿವಮೊಗ್ಗ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ; 21 ವರ್ಷದ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

23
0

ಶಿವಮೊಗ್ಗ ಜಿಲ್ಲೆಯ ಶರಾವತಿನಗರ ಪ್ರದೇಶದಲ್ಲಿ ಮಂಗಳವಾರ ಮೋಟಾರ್ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶರಾವತಿನಗರ ಪ್ರದೇಶದಲ್ಲಿ ಮಂಗಳವಾರ ಮೋಟಾರ್ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಕಾಲೇಜು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

ಮೃತರನ್ನು ಗೌತಮ್ ಎಂದು ಗುರುತಿಸಲಾಗಿದೆ. ಮೃತ ಯುವಕ ನಿವೃತ್ತ ನ್ಯಾಯಾಧೀಶ ಶಿವಾನಂದ್ ಅವರ ಪುತ್ರ.

ಇದನ್ನೂ ಓದಿ: ಮೈಸೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಯುವಕರ ದುರ್ಮರಣ

ಕಾಲೇಜಿನ ಗೋಲ್ಡನ್ ಜುಬಿಲಿ ಆಚರಣೆಗಾಗಿ ಸೋಮವಾರ ರಾತ್ರಿ ಕಾಲೇಜಿನಲ್ಲಿ ಉಳಿದುಕೊಂಡಿದ್ದ ಗೌತಮ್ ಮುಂಜಾನೆ ಮನೆಯ ಕಡೆಗೆ ಹೊರಟಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here