Home Uncategorized ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ

ಶಿವಾಜಿನಗರ ಕ್ಷೇತ್ರದಲ್ಲಿ ಯಾವುದೇ ಮತದಾರರ ಹೆಸರು ಕೈಬಿಟ್ಟಿಲ್ಲ: ಬಿಬಿಎಂಪಿ

31
0

ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ. ಬೆಂಗಳೂರು: ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ಕೈಬಿಟ್ಟಿಲ್ಲ ಎಂದು ಬಿಬಿಎಂಪಿ ಗುರುವಾರ ಸ್ಪಷ್ಟಪಡಿಸಿದೆ.

ಪಟ್ಟಿಯಲ್ಲಿ ಮತದಾರರ ಹೆಸರನ್ನು ಕೈ ಬಿಡಲಾಗಿದೆ ಎಂದು ಶಿವಾಜಿನಗರ ಕ್ಷೇತ್ರದ ಶಾಸಕರು ಹೇಳಿರುವುದು ಕೆಲ ಮಾಧ್ಯಮದಲ್ಲಿ ಪ್ರಕಟವಾಗಿದೆ. ಕ್ಷೇತ್ರದಲ್ಲಿ 91 ಮತಗಟ್ಟೆಗಳ ವ್ಯಾಪ್ತಿಯಲ್ಲಿ ವಾಸವಿಲ್ಲದ, ಮರಣ ಹೊಂದಿರುವ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು, ಮನೆಗೆ ಭೇಟಿ ನೀಡಿ ಸ್ಥಳಾಂತರಗೊಂಡ ಮತದಾರರ ಪಟ್ಟಿಯನ್ನು ತಯಾರಿಸಿದ್ದಾರೆ.

ಇಂಥ ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರತ್ಯೇಕ ಪ್ರಮಾಣಿತ ಕಾರ್ಯಾಚರಣೆಯ ವಿಧಾನ(ಎಸ್‌ಒಪಿ) ಪಾಲಿಸಬೇಕಿದೆ. ಅದರಂತೆ, 9,195 ಸ್ಥಳಾಂತರಗೊಂಡ ಮತದಾರರಿಗೆ ನೋಟಿಸ್ ನೀಡಲಾಗಿತ್ತು. ಚುನಾವಣಾ ವರ್ಷದ 6 ತಿಂಗಳ ಪೂರ್ವದಲ್ಲಿ ಮತದಾರರ ಪಟ್ಟಿಯಲ್ಲಿ ಯಾವುದೇ ಡಿಲೀಟ್ ಹೆಸರುಗಳನ್ನು ಸ್ವಯಂಪ್ರೇರಿತವಾಗಿ ಸೇರಿಸಲು ಅಧಿಕಾರಿಗಳಿಗೆ ಅವಕಾಶ ಇಲ್ಲ. ಹಾಗಾಗಿ. ಮುಂದಿನ ಕ್ರಮಕ್ಕಾಗಿ ಚುನಾವಣಾ ಆಯೋಗದ ನಿರ್ದೇಶನಕ್ಕೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಅಲ್ಲದೆ, ಈ ವಿಚಾರ ಕುರಿತು ದೂರುದಾರರೊಬ್ಬರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಿದ 22 ಮತದಾರರ ಕುರಿತು ಪರಿಶೀಲಿಸಲಾಗಿದೆ. ಈ ವೇಳೆ ಮತದಾರರ ಸಾಮಾನ್ಯ ನಿವಾಸಿಗಳು ಎಂಬುದನ್ನು ಖಚಿತ ಪಡಿಸಿಕೊಂಡು ನೀಡಿರುವ ನೋಟೀಸ್‌ಗೆ ಮುಂದಿನ ಪ್ರಕ್ರಿಯೆ ಕೈ ಬಿಡಲಾಗಿದೆ ಎಂದು ನ್ಯಾಯಾಲಯದಲ್ಲಿ ಹೇಳಿಕೆ ಸಲ್ಲಿಸಲಾಗಿದೆ. ಆದ್ದರಿಂದ, ದೂರಿಗೆ ಸಂಬಂಧ ಈ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾವುದೇ ಹೆಸರನ್ನು ಕೈಬಿಟ್ಟಿಲ್ಲ ಎಂದು ತಿಳಿಸಿದೆ.

LEAVE A REPLY

Please enter your comment!
Please enter your name here