ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಇದೇ 26 ರಂದು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ.
ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ.
ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಈ ಹೋರಾಟದ ಮೂಲಕ ಆರೋಪಿಗಳ ಬಂಧನಕ್ಕೆ ಒತ್ತಾಯಿಸಲು ಹಿಂದೂ ಸಮುದಾಯ ಮುಂದಾಗಿದೆ.
