ಬೆಂಗಳೂರು : ಸಂಸದ ಜಗದೀಶ್ ಶೆಟ್ಟರ್ ಅವರ ರಾಜಿನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಜುಲೈ.12ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
2023ರ ವಿಧಾನಸಭಾ ಚುನಾವಣೆ ವೇಳೆ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಗೆಲುವು ಸಾಧಿಸದ್ದರಿಂದ ಅವರನ್ನು ಆ ಬಳಿಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಿತ್ತು. ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ, ವಿಧಾನ ಪರಿಷತ್ ಸ್ಥಾನಕ್ಕೂ ರಾಜಿನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಜುಲೈ 12ರಂದು ಮತದಾನ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನವಾಗಿದ್ದು, ಮತದಾನದ ದಿನವೇ ಸಂಜೆ 5 ಗಂಟೆಗೆ ಪಲಿತಾಂಶ ಬರಲಿದೆ ಎಂದು ಆಯೋಗ ತಿಳಿಸಿದೆ.