Home Uncategorized ಶೇ.17ರಷ್ಟು ವೇತನ ಹೆಚ್ಚಿಸಿದ ಸಿಎಂ ಬೊಮ್ಮಾಯಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

ಶೇ.17ರಷ್ಟು ವೇತನ ಹೆಚ್ಚಿಸಿದ ಸಿಎಂ ಬೊಮ್ಮಾಯಿಗೆ ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ

22
0

ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘ ಗುರುವಾರ ಅಭಿನಂದನೆ ಸಲ್ಲಿಸಿತು. ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ಮಧ್ಯಂತರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೌಕರರ ಸಂಘ ಗುರುವಾರ ಅಭಿನಂದನೆ ಸಲ್ಲಿಸಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ನೌಕರರ ಸಂಘದ ಮಾಜಿ ಅಧ್ಯಕ್ಷ ಬೈರಪ್ಪ ಅವರ ನೇತೃತ್ವದಲ್ಲಿ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಅವರ ಆರ್‌.ಟಿ. ನಗರದ ನಿವಾಸಕ್ಕೆ ತೆರಳಿದ ಅಭಿನಂದನೆ ಸಲ್ಲಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಶೇ 17% ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿರವರ ನೇತೃತ್ವದ ನಿಯೋಗವು ಇಂದು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.
1/2 pic.twitter.com/7bAjVcBfXj
— Basavaraj S Bommai (@BSBommai) March 2, 2023

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯ ಸರ್ಕಾರಿ ನೌಕರರ ಹಿತ ಕಾಯಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here