ಶ್ರೀನಗರ: ಸಿಆರ್ಪಿಎಫ್ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ವಾಹನ ನದಿಗೆ ಬಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಶ್ರೀನಗರ ಹೊರವಲಯದಲ್ಲಿರುವ ಅಹ್ಮದ್ನಗರ ಪ್ರದೇಶದ ಡಾಗ್ಪೋರಾ-ಉಮರ್ಹೇರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಬಳಿಕ ವಾಹನ ನದಿಗೆ ಬಿದ್ದಿದೆ. ಗಾಯಗೊಂಡಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಿಬ್ಬಂದಿಯನ್ನು ಸೌರಾದ ಸ್ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
