Home Uncategorized ಶ್ರೀರಾಮ ಬಿಜೆಪಿಗರ ಮನೆಯ ಆಸ್ತಿಯೇ: ಡಿ.ಕೆ ಶಿವಕುಮಾರ್‌ ಪ್ರಶ್ನೆ

ಶ್ರೀರಾಮ ಬಿಜೆಪಿಗರ ಮನೆಯ ಆಸ್ತಿಯೇ: ಡಿ.ಕೆ ಶಿವಕುಮಾರ್‌ ಪ್ರಶ್ನೆ

27
0

ಬೆಂಗಳೂರು:  ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಕೂಗಿರುವುದಕ್ಕೆ ಬಿಜೆಪಿ ನಾಯಕರು ಟೀಕೆ ಮಾಡುತ್ತಿರುವ ವಿಷಯ ಸಂಬಂಧ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್‌ ಅವರು, “ಶ್ರೀರಾಮ ಬಿಜೆಪಿಯವರ ಮನೆಯ ಆಸ್ತಿಯೇ? ರಾಮ ಯಾರ ಮನೆ ಆಸ್ತಿಯೂ ಅಲ್ಲ. ಗಾಂಧೀಜಿ ಅವರು ರಘುಪತಿ ರಾಘವ ರಾಜಾರಾಂ ಪತೀತ ಪಾವನ ಸೀತಾರಾಮ್ ಎಂದು ಹೇಳಿದ್ದು, ಅಲ್ಲಿ ರಾಮ ಹಾಗೂ ಸೀತೆ ಇಬ್ಬರೂ ಇದ್ದಾರೆ. ಅವರು ನಮ್ಮನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಈ ರೀತಿ ಟೀಕೆ ಮಾಡುತ್ತಾರೆ ಎಂದು ಹೇಳಿದರು.

ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಮಲಿಂಗಾ ರೆಡ್ಡಿ ಅವರ ನೇತೃತ್ವದ ಧಾರ್ಮಿಕ ದತ್ತಿ ಇಲಾಖೆ ಮೂಲಕ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದೆ. ಇದನ್ನು ಸಹಿಸಲು ಬಿಜೆಪಿಗೆ ಆಗುತ್ತಿಲ್ಲ. ಕಾಂಗ್ರೆಸಿಗರು ಈ ಕೆಲಸ ಮಾಡುತ್ತಿದ್ದಾರೆ. ನಮಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಅಸೂಯೆಯಿಂದ ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ಸದ್ಯದಲ್ಲೇ ಕಾರ್ಯಕರ್ತರ ಸಮಾವೇಶದ ದಿನ ಪ್ರಕಟ

21ರಂದು ನಡೆಯಬೇಕಿದ್ದ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದ್ದು, ಪಕ್ಷದ ಅಧ್ಯಕ್ಷರ ಜತೆ ಮಾತನಾಡಿ ಶೀಘ್ರದಲ್ಲೇ ಸಮಾವೇಶದ ದಿನಾಂಕ ಪ್ರಕಟಿಸುತ್ತೇವೆ ಎಂದರು.

ಎಲ್ಲರ ಅಭಿಪ್ರಾಯ ಸ್ವೀಕಾರ

ನಿಗಮ ಮಂಡಳಿ ನೇಮಕದಲ್ಲಿ ನಮ್ಮ ಅಭಿಪ್ರಾಯ ಪಡೆದಿಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಎಲ್ಲರ ಅಭಿಪ್ರಾಯವನ್ನು ಪಡೆದು, ಮಾರ್ಗಸೂಚಿ ನಿಗದಿ ಮಾಡಿದ್ದು, ಅದರಂತೆ ಎಲ್ಲರಿಗೂ ಅಧಿಕಾರ ಹಂಚಲಾಗುವುದು” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here