ದೊಡ್ಡಬಳ್ಳಾಪುರ: ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ಕೃಷ್ಣಪ್ಪ ನವರನ್ನು ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಡಿ.ನಾಗರಾಜು ನೇಮಕ ಮಾಡಲಾಗಿದೆ. ಕರ್ನಾಟಕ ಆಡಳಿತ ನ್ಯಾಯ ಮಂಡಳಿಯು ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡುವಂತೆ ನ.02 ರಂದು ಆದೇಶ ನೀಡಿದೆ.
ಘಾಟಿ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್.ಕೃಷ್ಣಪ್ಪನವರನ್ನು ಕುಣಿಗಲ್ ತಾಲ್ಲೂಕಿನ ಯಡೆಯೂರು ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯಕ್ಕೆ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಕೃಷ್ಣಪ್ಪ ನವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.