ಬೆಂಗಳೂರು:
ಬೃಹತ್ ಬೆಂಗಳೂರು ಮಾಜಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು, ಆಡಳಿತ ಮಂಡಳಿ ಅವರು ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ತಮಗೆ ಕೊರೊನಾ ಸೋಂಕು ಇದೆ ಎಂದು ಸಮಜಾಯಿಷಿ ನೀಡಿ ಸಂಪತ್ ರಾಜ್ ಅವರುಈ ಹಿಂದೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಸಿಸಿಬಿ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಸಂಪತ್ ರಾಜ್ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಮುನ್ನ ತಮಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದರು.
ಆದರೆ, ಸಂಪತ್ ರಾಜ್ ಕಳದೆ 29ರಂದು ರಾತ್ರೋರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ನಾಪತ್ತೆಯಾಗಿದ್ದರು.