Home Uncategorized ಸರ್ಕಾರದ ಒಳಮೀಸಲಾತಿ ನಿರ್ಧಾರ ವಿರುದ್ಧ ಹೋರಾಟ: ಶಿಕಾರಿಪುರದಲ್ಲಿ ಯಡಿಯೂರಪ್ಪ ನಿವಾಸ ಮೇಲೆ ಮುತ್ತಿಗೆ ಯತ್ನ, ಕಲ್ಲು...

ಸರ್ಕಾರದ ಒಳಮೀಸಲಾತಿ ನಿರ್ಧಾರ ವಿರುದ್ಧ ಹೋರಾಟ: ಶಿಕಾರಿಪುರದಲ್ಲಿ ಯಡಿಯೂರಪ್ಪ ನಿವಾಸ ಮೇಲೆ ಮುತ್ತಿಗೆ ಯತ್ನ, ಕಲ್ಲು ತೂರಾಟ

39
0

ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಅವರ ನಿವಾಸಕ್ಕೆ ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.

@XpressBengaluru @_marxtejaswi ಇಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಅವರ ನಿವಾಸಕ್ಕೆ ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ. pic.twitter.com/3RLZVdWaNa
— kannadaprabha (@KannadaPrabha) March 27, 2023

ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಪಟ್ಟಣದಲ್ಲಿ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಫ್ಲೆಕ್ಸ್ ಗಳು, ಬ್ಯಾನರ್ ಗಳನ್ನು ಹರಿದು ಹಾಕಿದರು. ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. Stones were pelted at the house of former CM @BSYBJP in Shikaripura today. The incident happened when Banjara community activists were protesting against internal reservation for SCs announced by the state government. @XpressBengaluru pic.twitter.com/Rpw5FQD1g1— Marx Tejaswi (@_marxtejaswi) March 27, 2023

ಕೊಪ್ಪಳದಲ್ಲಿಯೂ ಪ್ರತಿಭಟನೆ: 2ಬಿ ಮೀಸಲಾತಿಯನ್ನು ಮತ್ತೆ ತರುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಇಂದು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.

2ಬಿ ಮೀಸಲಾತಿಯನ್ನು ಮತ್ತೆ ತರುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಇಂದು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.@XpressBengaluru pic.twitter.com/LRL7Oz2SNc
— kannadaprabha (@KannadaPrabha) March 27, 2023

LEAVE A REPLY

Please enter your comment!
Please enter your name here