ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್, 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ
ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ @INCKarnataka ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ @JanataDal_S ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ. 2/2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 20, 2023