ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ. ಬೆಂಗಳೂರು: ತಿಳಿದೋ ತಿಳಿಯದೆಯೋ ಸಂಚಾರಿ ನಿಯಮ ಉಲ್ಲಂಘಿಸಿರುವವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯ್ತಿ ನೀಡಿದೆ.
ದಂಡ ಕಟ್ಟದೆ ಬಾಕಿ ಇಳಿಸಿಕೊಂಡಿರುವವರು ಮತ್ತು ಪ್ರಕರಣ ಕೋರ್ಟ್ ನಲ್ಲಿ ಇದ್ದರೆ ಅಂತಹವರು ಇದೇ ಫೆಬ್ರವರಿ 11ರೊಳಗೆ ದಂಡ ಪಾವತಿಸಿದರೆ ಶೇಕಡಾ 50ರಷ್ಟು ರಿಯಾಯ್ತಿ ಸಿಗಲಿದೆ.
ಫೆಬ್ರವರಿ 11ರಂದು ಲೋಕ ಅದಾಲತ್ ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯ್ತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ವೀರಪ್ಪ ಮನವಿ ಮಾಡಿದ್ದರು.
ಇದನ್ನೂ ಓದಿ: ಯಾವುದೇ ತಪ್ಪಿಲ್ಲದಿದ್ದರೂ ಮೆಮೋ: ಬೆಂಗಳೂರು ಸಂಚಾರಿ ಪೊಲೀಸರ ಅಳಲು
ಅದರಂತೆ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಶೇಕಡ 50ರಷ್ಟು ರಿಯಾಯ್ತಿ ನೀಡಿ ಆದೇಶ ಹೊರಡಿಸಿದ್ದಾರೆ. ಇನ್ನು ಫೆಬ್ರವರಿ 11ರೊಳಗೆ ಕಟ್ಟಲು ಸಾಧ್ಯವಾಗದಿದ್ದರೆ ಫೆಬ್ರವರಿ 11ರ ನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕಾಗುತ್ತದೆ.