Home Uncategorized ಸಾಲ ನೀಡಿ ಜನರಿಗೆ ಕಿರುಕುಳ: 42 ಆ್ಯಪ್ ಗಳ ರದ್ದುಪಡಿಸಿದ ಸರ್ಕಾರ

ಸಾಲ ನೀಡಿ ಜನರಿಗೆ ಕಿರುಕುಳ: 42 ಆ್ಯಪ್ ಗಳ ರದ್ದುಪಡಿಸಿದ ಸರ್ಕಾರ

29
0

ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ 42 ಮೊಬೈಲ್ ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ರದ್ದುಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ. ಬೆಂಗಳೂರು: ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ 42 ಮೊಬೈಲ್ ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ರದ್ದುಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ವಿಧಾನಪರಿಷತ್ತಿನಲ್ಲಿ ಸಾಲದ ಆ್ಯಪ್ ಗಳ ಕುರಿತು ಮಾತನಾಡಿದ ಬಿಜೆಪಿ ಎಂಎಲ್‌ಸಿ ಡಿಎಸ್ ಅರುಣ್ ಅವರು, ಆನ್‌ಲೈನ್ ಗೇಮಿಂಗ್ ಮತ್ತು ಆನ್‌ಲೈನ್ ಹಣ ಸಾಲ ನೀಡುವ ಅಪ್ಲಿಕೇಶನ್‌ಗಳು ಜನರಿಗೆ ಕಿರುಕುಳ ನೀಡುತ್ತಿವೆ. ವಿಶೇಷವಾಗಿ ಗೇಮಿಂಗ್ ಅಪ್ಲಿಕೇಶನ್‌ಗಳು ಯುವಕರ ಶಿಕ್ಷಣ ಮತ್ತು ಜೀವನವನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು.

ಅಲ್ಲದೆ, ಈ ಗೇಮಿಂಗ್ ಆ್ಯಪ್ ಗಳಿಗೆ ಸೆಲೆಬ್ರಿಟಿಗಳು ಪ್ರಚಾರ ಮಾಡುತ್ತಿರುವುದು ಕಳವಳ ವಿಚಾರವಾಗಿದೆ, ಇದು ಯುವಜನರನ್ನು ಆನ್‌ಲೈನ್ ಜೂಜಿನಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ತಿಳಿಸಿದರು.

ಈ ವೇಳೆ ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇಂತಹ ಆ್ಯಪ್‌ಗಳ ಹಾವಳಿಯನ್ನು ತಡೆಯಲು ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಈಗಾಗಲೇ ಗೂಗಲ್ ಪ್ಲೇ ಸ್ಟೋರ್ ನಿಂದ 42 ಅಪ್ಲಿಕೇಶನ್ ಗಳನ್ನು ತೆಗೆದುಹಾಕಲಾಗಿದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಅರುಣ್ ಅವರು, ಈಗಲೂ 800 ಆ್ಯಪ್ ಗಳು ಸಕ್ರಿಯವಾಗಿವೆ ಎಂದರು. ಬಳಿಕ ಮಾತನಾಡಿದ ಗುಂಡೂರಾವ್ ಅವರು, ಕೇಂದ್ರ ಸರ್ಕಾರವು ಇವುಗಳನ್ನು ನಿಯಂತ್ರಿಸುವುದರಿಂದ ರಾಜ್ಯದಿಂದ ಮಾತ್ರ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 2,200 ಎಕರೆಗೂ ಹೆಚ್ಚು ಅರಣ್ಯ ಒತ್ತುವರಿಯಾಗಿದೆ
1978ರ ನಂತರ ಬೆಂಗಳೂರು ನಗರ ಪ್ರದೇಶದಲ್ಲಿ ಲಭ್ಯವಿರುವ 16,988.26 ಎಕರೆ ಅರಣ್ಯ ಭೂಮಿಯಲ್ಲಿ 2,284.22 ಎಕರೆ ಒತ್ತುವರಿಯಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಪರಿಷತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅರಣ್ಯ ಭೂಮಿ ಒತ್ತುವರಿಯಾಗಿದ್ದು, 1,277.33 ಎಕರೆ ಒತ್ತುವರಿಯಾಗಿದೆ, ಬೆಂಗಳೂರು ಪೂರ್ವದಲ್ಲಿ 570 ಎಕರೆ ಮತ್ತು ಆನೇಕಲ್‌ನಲ್ಲಿ 332 ಎಕರೆ ಒತ್ತುವರಿಯಾಗಿದೆ. ಬನ್ನೇರುಘಟ್ಟ ವಿಭಾಗದಲ್ಲಿ 587.15 ಎಕರೆ ಒತ್ತುವರಿಯಾಗಿದೆ. ಈ ಸಂಬಂಧ ಕರ್ನಾಟಕ ಅರಣ್ಯ ಕಾಯಿದೆ 1963ರ ಅಡಿಯಲ್ಲಿ 1,051 ಪ್ರಕರಣಗಳು ದಾಖಲಾಗಿದ್ದು, ಒತ್ತುವರಿ ತೆರವಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here