Home ಕರ್ನಾಟಕ ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ : ಡಿ.ಕೆ.ಶಿವಕುಮಾರ್

ಸಾಹಿತಿಗಳನ್ನು ಕಾಂಗ್ರೆಸ್ ಕಚೇರಿಗೆ ಕರೆದರೆ ತಪ್ಪೇನಿದೆ : ಡಿ.ಕೆ.ಶಿವಕುಮಾರ್

46
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಚೇರಿಗೆ ಸಾಹಿತಿಗಳನ್ನು ಕರೆದದ್ದು ನಾನೇ, ಅದರಲ್ಲಿ ತಪ್ಪೇನಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಅಕಾಡೆಮಿ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಹಿತಿಗಳು ರಾಜಕಾರಣಿಗಳು ಆಗಬಾರದು ಅಂತೇನಿಲ್ಲವಲ್ಲ. ಅಕಾಡೆಮಿ ಅಧ್ಯಕ್ಷರ ಸಭೆ ನಾನೇ ಕರೆದಿದ್ದು, ಅದರಲ್ಲೇನಿದೆ. ಇದು ಸರಕಾರದ ನೇಮಕ. ಹೀಗಾಗಿ ಎಲ್ಲಿ ಬೇಕಾದರೂ ಕರೆಸಿಕೊಳ್ಳಬಹುದು. ಎಲ್ಲಿ ಬೇಕಾದರೂ ಸಭೆ ಮಾಡಬಹುದು ಎಂದರು.

ಪ್ರಾಧಿಕಾರಗಳು ಇಂಡಿಪೆಂಡೆಂಡ್ ಬಾಡಿಗಳಲ್ಲ, ಆಲ್.ಆರ್.ಪೊಲಿಟೀಷಿಯನ್ಸ್, ಅವರದ್ದೇ ಆದ ಸಿದ್ಧಾಂತಗಳನ್ನು ಇಟ್ಟುಕೊಂಡು ಅವರೂ ರಾಜಕೀಯ ಮಾಡುತ್ತಾರೆ. ಅದನ್ನು ಕೆಲವೊಬ್ಬರು ಹೇಳಿಕೊಳ್ಳದೇ ಇರಬಹುದು. ನಾನು ಕರೆದಾಗ, ಇಷ್ಟ ಇದ್ದೋರು ಬಂದಿದ್ದಾರೆ. ಕೆಲವರು ಬಂದಿಲ್ಲ ಎಂದು ಅವರು ಹೇಳಿದರು.

ಇದು ಮಾಧ್ಯಮದವರಿಗೆ ತಪ್ಪು ಎನಿಸಬಹುದು. ಸಾಹಿತಿಗಳೂ ರಾಜಕಾರಣಿಗಳೇ, ಅವರೂ ರಾಜಕಾರಣಕ್ಕೆ ಬರಬಹುದು. ನಿಮ್ಮನ್ನು ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿಕೊಳ್ಳುವುದಿಲ್ಲವೇ, ನೀವು ಬೆಳಗಿಂದ ಸಾಯಂಕಾಲದ ತನಕ ನಮ್ಮ ಹಿಂದೆ ಓಡಾಡುವುದಿಲ್ಲವೇ?, ನಮಗೋಸ್ಕರ ಬಡಿದಾಡೋದಿಲ್ಲವೇ ಎಂದು ಶಿವಕುಮಾರ್ ಪ್ರಶ್ನಿಸಿದರು.

LEAVE A REPLY

Please enter your comment!
Please enter your name here