Home Uncategorized ಸಿಎಂ ಆಯ್ಕೆ ಅಧಿಕೃತ ಘೋಷಣೆ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಸಿಎಂ ಆಯ್ಕೆ ಅಧಿಕೃತ ಘೋಷಣೆ ಬೆನ್ನಲ್ಲೇ ಗ್ಯಾರೆಂಟಿಗಳ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

29
0

ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ಮಾತನಾಡಿದ್ದಾರೆ. ಬೆಂಗಳೂರು: ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಎಐಸಿಸಿ ಅಧಿಕೃತ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಪಕ್ಷದ ಗ್ಯಾರೆಂಟಿ ಘೋಷಣೆಗಳ ಬಗ್ಗೆ ಸಿದ್ದರಾಮಯ್ಯ ಅವರು ಖಡಕ್ ಆಗಿ ಮಾತನಾಡಿದ್ದಾರೆ.

ಸಿಎಂ ಘೋಷಣೆ ಬಳಿಕ ಮೊದಲ ಬಾರಿಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ.

ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ. pic.twitter.com/V0OoO7JUKQ
— Siddaramaiah (@siddaramaiah) May 18, 2023

ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ, ಜೆಡಿಎಸ್ ಹಾಗೂ ಇತರರಿಗೂ ಬಿಸಿ ಮುಟ್ಟಿಸಿದೆ.

ಈ ಗೆಲುವಿಗೆ ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳ ಪಾಲೂ ದೊಡ್ಡದಿದೆ. ಚುನಾವಣೆಗೂ ಮುನ್ನವೇ ರಾಜ್ಯದ ಜನಸಾಮಾನ್ಯರು, ಗೃಹಿಣಿಯರು, ನಿರುದ್ಯೋಗಿಗಳು, ರೈತರು ಸೇರಿದಂತೆ ಹಲವು ವರ್ಗಗಳವನ್ನು ಗುರುಯಾಗಿಸಿಕೊಂಡು 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದ್ದು, ಇದೀಗ ಆ 5 ಗ್ಯಾರಂಟಿಗಳನ್ನು ಈಡೇರಿಸಬೇಕೆಂದು ರಾಜ್ಯಾದ್ಯಂತ ಜನಸಾಮಾನ್ಯರ ಕೂಗು ಜೋರಾಗುತ್ತಿದೆ.

LEAVE A REPLY

Please enter your comment!
Please enter your name here