ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕವಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ನೇಮಕವಾಗಿದ್ದು, ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ.
#Virajpet MLA AS Ponnanna to be appointed as the legal advisor (with cabinet rank) to CM Siddaramaiah… #Kodagu residents demanded cabinet berth to Ponnanna & several memorandums were sent to the CM in this regard from various organizations…@XpressBengaluru pic.twitter.com/iLgxGDhPdC
— Prajna G R (@prajna_gr) June 1, 2023
ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್ ಅಹ್ಮದ್ ನೇಮಕ!
ಈ ಹಿಂದೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕಾನೂನು ಸಲಹೆಗಾರರನ್ನಾಗಿ (ಕ್ಯಾಬಿನೆಟ್ ದರ್ಜೆಯೊಂದಿಗೆ) ನೇಮಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಕೊಡಗು ನಿವಾಸಿಗಳು ಪೊನ್ನಣ್ಣ ಅವರಿಗೆ ಸಂಪುಟ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿವಿಧ ಸಂಘಟನೆಗಳಿಂದ ಮನವಿ ಪತ್ರ ಬರೆದಿದ್ದಾರೆ.