Home ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರೇಣುಕಾಸ್ವಾಮಿ ತಾಯಿ- ತಂದೆ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರೇಣುಕಾಸ್ವಾಮಿ ತಾಯಿ- ತಂದೆ

24
0

ಬೆಂಗಳೂರು: ಚಿತ್ರದುರ್ಗದ ಮೃತ ರೇಣುಕಾಸ್ವಾಮಿಯ ತಂದೆ ಹಾಗೂ ತಾಯಿ ಮಂಗಳವಾರ ಕಾವೇರಿಯಲ್ಲಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಳಲು ತೋಡಿಕೊಂಡರು.

ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಹೆತ್ತವರು ತಮ್ಮ ಸೊಸೆ ಸಹನಾ ಅವರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಮನವಿ ಮಾಡಿದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಅವರು, ಕಾನೂನು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ರೇಣುಕಾಸ್ವಾಮಿ ಪತ್ನಿ ಸಹನಾಗೆ ಸರ್ಕಾರಿ ಕೆಲಸ ಕೊಡಿಸುವ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.

LEAVE A REPLY

Please enter your comment!
Please enter your name here