Home Uncategorized ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಸೆಸ್ಕ್ ಎಂಡಿ ಸಿ.ಎನ್.ಶ್ರೀಧರ್ ಅಮಾನತು

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಸೆಸ್ಕ್ ಎಂಡಿ ಸಿ.ಎನ್.ಶ್ರೀಧರ್ ಅಮಾನತು

37
0

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಹಾಜರಿಲ್ಲದೇ ಕರ್ತವ್ಯ ಲೋಪ ಎಸಗಿದ ಶಿಷ್ಟಾಚಾರ ಉಲ್ಲಂಘನೆ ಹಾಗೂ ಮುಜುಗರವನ್ನು ಉಂಟು ಮಾಡಿದ ಹಿನ್ನಲೆಯಲ್ಲಿ ಮೈಸೂರು ಸೆಸ್ಕ್ ವ್ಯವಸ್ಥಾಪಕ ನಿದೇರ್ಶಕ ಸಿ.ಎನ್.ಶ್ರೀಧರ್ (ಕೆಎಎಸ್,ಸೂಪರ್ ಟೈಂ ಸ್ಕೇಲ್) ಅವರನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಬಳಿ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದಿದ್ದರು. ಅವರು ಬಟನ್ ಒತ್ತಿದಾಗ ಯಂತ್ರ ಚಾಲನೆ ಪಡೆದಿರಲಿಲ್ಲ. ಇದರಿಂದ ಅವರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು ಹಾಗೂ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡಿದ್ದರು.

ವ್ಯವಸ್ಥಿತವಾಗಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರಿಯಾಗದೇ ಕರ್ತವ್ಯದಲ್ಲಿ ಅಸಡ್ಡೆ ಹಾಗೂ ನಿರ್ಲಕ್ಷ್ಯದಿಂದ ಸರ್ಕಾರವನ್ನು ಮುಜುಗರಕ್ಕೆ ಒಳಪಡುವ ಸನ್ನಿವೇಶ ಸೃಷ್ಟಿಗೆ ನೇರ ಕಾರಣವಾದ್ದರಿಂದ ಅವರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧಿಕಾರಿಯು ಅಮಾನತಿನ ಅವಧಿಯಲ್ಲಿ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ. ಅವರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶಿಸಲಾಗಿದೆ.

LEAVE A REPLY

Please enter your comment!
Please enter your name here