ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಅನುಭವ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಎದುರೇ ʼಸಿಎಂ ಸ್ಥಾನವನ್ನು ಬಿಟ್ಟುಕೊಡಿʼ ಎಂದು ಮನವಿ ಮಾಡಿದ್ದಾರೆ.
ಅಲ್ಲದೆ, ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ ಎಂದರು.
ಸಿದ್ದರಾಮಯ್ಯ ಹೇಳಿದ್ದೇನು?
ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಕೊಡಬೇಕೆಂಬ ಸ್ವಾಮೀಜಿಯ ಮನವಿ ಸಂಬಂಧ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ʼಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಲಿದೆ. ಹೈಕಮಾಂಡ್ ತೀರ್ಮಾನದಂತೆ ನಾವು ನಡೆದುಕೊಳ್ಳುತ್ತೇವೆʼ ಎಂದು ಹೇಳಿದರು.