Home Uncategorized ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ: ಸಚಿವ ಎಂ.ಬಿ. ಪಾಟೀಲ್

ಸಿದ್ದರಾಮಯ್ಯನವರೇ 5 ವರ್ಷ ಸಿಎಂ, ಅಧಿಕಾರ ಹಂಚಿಕೆ ಮಾತುಕತೆ ಆಗಿಲ್ಲ: ಸಚಿವ ಎಂ.ಬಿ. ಪಾಟೀಲ್

32
0

ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಂತ್ರಿಯಾಗಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ. ಮೈಸೂರು: ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ರಾಜ್ಯದ ಮುಖ್ಯಂತ್ರಿಯಾಗಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಸೋಮವಾರ ಹೇಳಿದ್ದಾರೆ.

ಇಂದು ಮೈಸೂರಿಮ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ಇದನ್ನು ಓದಿ: ರಾಜ್ಯ ವಿಧಾನಸಭಾ ಅಧಿವೇಶನ: ಸಿಎಂ, ಡಿಸಿಎಂ ಸೇರಿ ನೂತನ ಸಚಿವರು ಹಾಗೂ ಶಾಸಕರ ಪ್ರಮಾಣ ವಚನ ಸ್ವೀಕಾರ

ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಸಿಎಂ ಆಗಿರಲಿದ್ದಾರೆ ಎಂಬುದನ್ನು ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲ ಹಗರಣಗಳನ್ನೂ ತನಿಖೆ ನಡೆಸಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದರು.

LEAVE A REPLY

Please enter your comment!
Please enter your name here