Home Uncategorized ಸಿದ್ದರಾಮಯ್ಯ​ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದಿದ್ದ ಸಿಟಿ ರವಿ ವಿರುದ್ಧ ಪೊಲೀಸರಿಗೆ ದೂರು

ಸಿದ್ದರಾಮಯ್ಯ​ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದಿದ್ದ ಸಿಟಿ ರವಿ ವಿರುದ್ಧ ಪೊಲೀಸರಿಗೆ ದೂರು

23
0

ಬೆಂಗಳೂರು: ಸಿದ್ರಾಮುಲ್ಲಾ ಖಾನ್​ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿಕೆ ನೀಡಿದ್ದ ಸಿ.ಟಿ.ರವಿ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ಕಾಂಗ್ರೆಸ್​ ದೂರು ದಾಖಲಿಸಿದೆ. ಕಾಂಗ್ರೆಸ್​ ಮುಖಂಡ ಎಸ್​​.ಮನೋಹರ್​ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ಸಿ.ಟಿ.ರವಿ ಕಾನೂನು ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ಸಿ.ಟಿ.ರವಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ದೂರು ನೀಡಲಾಗಿದೆ.

ಶಾಸಕ ಸಿ.ಟಿ.ರವಿ ಕಮ್ಯೂನಲ್ ಫೆಲೊ, ಅವನಿಗೆ ಉತ್ತರ ಕೊಡಲ್ಲ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತೆ ಎಂಬ ಶಾಸಕ ಸಿ.ಟಿ.ರವಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್​ ಕೊಟ್ಟಿದ್ದಾರೆ. ಶಾಸಕ ಸಿ.ಟಿ.ರವಿ ಕಮ್ಯೂನಲ್ ಫೆಲೊ, ಅವನಿಗೆ ಉತ್ತರ ಕೊಡಲ್ಲ. ಸಿ.ಟಿ.ರವಿ ಕ್ರಿಮಿನಲ್ ಫೆಲೊ, ಅವರಿಗೆ ಜಾತ್ಯತೀತ ತತ್ವ ಅರ್ಥ ಆಗಲ್ಲ. ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ, ಅವರಿಗೆ ಸಂವಿಧಾನ ಅರ್ಥ ಆಗಲ್ಲ ಎಂದು ಶಿವಮೊಗ್ಗ ನಗರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ತೆರೆಮೇಲೆ ಬರಲಿದೆ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್; ವಿಜಯ್ ಸೇತುಪತಿ ಕಾಲ್​ಶೀಟ್ ಕೇಳಿದ ತಂಡ

ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ: ಸಿ.ಟಿ.ರವಿ ಹೇಳಿಕೆಗೆ ಡಿ.ಕೆ.ಶಿವಕುಮಾರ್​ ಆಕ್ರೋಶ

ಚಿತ್ರದುರ್ಗ: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ (hindu) ಹತ್ಯೆಯಾಗುತ್ತೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದರು. ಇದು ರಾಜ್ಯ ರಾಜಕೀಯದಲ್ಲಿ ತುಂಬಾ ಚರ್ಚೆಗೆ ಕೂಡ ಗ್ರಾಸವಾಗಿದೆ. ಸದ್ಯ ಸಿ.ಟಿ.ರವಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar)​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಹಿಂದೂಗಳ ಹತ್ಯೆ ಆಗುತ್ತೆ ಎಂದು ಯಾವ ಆಧಾರದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಅಶಾಂತಿ ಮೂಡಿಸುವ ಕೆಲಸ ನಡೆದಿದೆ. ಭ್ರಷ್ಟಾಚಾರ, ಮತಗಳ್ಳತನ ಕೇಸ್​ ಮುಚ್ಚಿ ಹಾಕಲು ಇಂತಹ ಹೇಳಿಕೆ ನೀಡಲಾಗುತ್ತಿದೆ. ಬಿಜೆಪಿಯವರು ಹಳ್ಳಿಗಳಲ್ಲಿ ಕೋಮುಗಲಭೆ ಹುಟ್ಟು ಹಾಕುತ್ತಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕೈಗೊಳ್ಳಬೇಕು. ನಮ್ಮ ಕಡೆಯವರ ಮೇಲೆ ಮಾತ್ರ ಪ್ರಕರಣ​ ದಾಖಲಿಸುತ್ತಿದ್ದಾರೆ. ಮೊದಲು ಶಾಸಕ ಸಿ.ಟಿ.ರವಿ ವಿರುದ್ಧ ಪ್ರಕರಣ​ ದಾಖಲಿಸಬೇಕು ಎಂದು ಡಿ.ಕೆ.ಶಿವಕುಮಾರ್​ ಒತ್ತಾಯಿಸಿದರು.

LEAVE A REPLY

Please enter your comment!
Please enter your name here