Home Uncategorized ಸಿರಾದಿಂದ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತರು ಹಾಸನ ಬಸ್ ನಿಲ್ದಾಣದಲ್ಲಿ ಪತ್ತೆ

ಸಿರಾದಿಂದ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತರು ಹಾಸನ ಬಸ್ ನಿಲ್ದಾಣದಲ್ಲಿ ಪತ್ತೆ

40
0

ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸೋಮವಾರ ಹಾಸನದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಹಾಸನ: ಎರಡು ದಿನಗಳ ಹಿಂದೆ ತುಮಕೂರು ಜಿಲ್ಲೆಯ ಸಿರಾದಲ್ಲಿ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಸೋಮವಾರ ಹಾಸನದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. 

ಸಿರಾ ತಾಲೂಕಿನ ಚಿಕ್ಕಬಾಣಗೆರೆ ನಿವಾಸಿಗಳಾದ ಬಾನು [13], ಮಧುಕುಮಾರ್ [13] ಮಂಜುಳಾ [13] ಮತ್ತು ಮಹಾಲಕ್ಷ್ಮಿ [15] ಶನಿವಾರದಂದು ನಾಪತ್ತೆಯಾಗಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. 

ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಹಾಸನ ವಿಸ್ತರಣಾ ಪೊಲೀಸರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಕ್ಕಳನ್ನು ಪತ್ತೆ ಮಾಡಿದ್ದಾರೆ. 

ಮಕ್ಕಳು ಕೂಲಿ ಕಾರ್ಮಿಕರ ಕುಟುಂಬದಿಂದ ಬಂದಿದ್ದು ಮಕ್ಕಳು ಯಾಕಾಗಿ ಮನೆ ಬಿಟ್ಟು ಬಂದಿದ್ದರು ಎಂದು ಬಹಿರಂಗಪಡಿಸಲು ನಿರಾಕರಿಸಿದ್ದು ಬೇರೆ ಬೇರೆ ಕಾರಣಗಳನ್ನು ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ. 

ಹಾಸನ ಪೊಲೀಸರು ಸಿರಾ ಪೊಲೀಸರ ನೆರವಿನಿಂದ ಮಕ್ಕಳನ್ನು ಪೋಷಕರಿಗೆ ಒಪ್ಪಿಸಿದ ಬಳಿಕ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

LEAVE A REPLY

Please enter your comment!
Please enter your name here