Home ಕರ್ನಾಟಕ ಸೂರಜ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಸಂತ್ರಸ್ತ ಯುವಕನಿಗೆ ವೈದ್ಯಕೀಯ ಪರೀಕ್ಷೆ

ಸೂರಜ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಸಂತ್ರಸ್ತ ಯುವಕನಿಗೆ ವೈದ್ಯಕೀಯ ಪರೀಕ್ಷೆ

12
0

ಹಾಸನ: ವಿಧಾನ ಪರಿಷತ್ ಸದಸ್ಯ ಡಾ. ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ  ಆರೋಪಿಸಿ ದೂರು ದಾಖಲಿಸಿರುವ ಸಂತ್ರಸ್ತ ಯುವಕನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿಗೆ ಕರೆದೊಯ್ದಿರುವ ಬಗ್ಗೆ ವರದಿಯಾಗಿದೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಯುವಕ ದೂರು ನೀಡಿರುವುದರಿಂದ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲು ಯುವಕ ಒಪ್ಪದ ಕಾರಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಮಾಹಿತಿ ಸಂಗ್ರಹ ಮುಖ್ಯವಾಗಿರುವ  ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಸಂತ್ರಸ್ತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

ಶನಿವಾರ ಸಂಜೆ ಡಾ.ಸೂರಜ್‌ರೇವಣ್ಣ ವಿರುದ್ಧ ದೂರು ಸಂತ್ರಸ್ತ ದೂರು ನೀಡಿದ್ದು, ಅದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here