ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಸೆಪ್ಟೆಂಬರ್ 12 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಕೊಡಗಿನ ಗುಡ್ಡಗಾಡು ಜಿಲ್ಲೆಗಳಿಗೂ ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ರಾಜಧಾನಿ ಬೆಂಗಳೂರು ಬೆಳಗ್ಗಿನ ಹೊತ್ತು ಗಿರಿಧಾಮವನ್ನು ಹೋಲುತ್ತದೆ. ನಗರದಾದ್ಯಂತ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಿದೆ. ನಿನ್ನೆ ರಾತ್ರಿ ಮಳೆಯಿಂದಾಗಿ ಬೆಂಗಳೂರು-ಬನ್ನೇರುಘಟ್ಟ ರಸ್ತೆ ಜಲಾವೃತಗೊಂಡು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು.
ಕೆಲವು ಪ್ರಮುಖ ಐಟಿ ಕಂಪನಿಗಳು ಬನ್ನೇರುಘಟ್ಟ ರಸ್ತೆಯಲ್ಲಿವೆ. ಪ್ರತಿಷ್ಠಿತ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್-ಬೆಂಗಳೂರು ಈ ರಸ್ತೆಯಲ್ಲಿದೆ.