Home Uncategorized ಸೋಲಿನ ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಅಪ ಪ್ರಚಾರ- ಹೆಚ್. ಸಿ. ಬಾಲಕೃಷ್ಣ ವಾಗ್ದಾಳಿ

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಅಪ ಪ್ರಚಾರ- ಹೆಚ್. ಸಿ. ಬಾಲಕೃಷ್ಣ ವಾಗ್ದಾಳಿ

27
0

ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲಿನ ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಅಪ ಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. ರಾಮನಗರ: ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯ ಸೋಲಿನ ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಅಪ ಪ್ರಚಾರ ನಡೆಸುತ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಮಾಗಡಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಂಡಿತವಾಗಿಯೂ ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಕುಮಾರಸ್ವಾಮಿ ವಿನಾಕಾರಣ ಗ್ಯಾರಂಟಿ ಬಗ್ಗೆ ಇಲ್ಲಸಲ್ಲದ ಅಪ ಪ್ರಚಾರ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ

ತಾನೂ ಕೂಡಾ ಹಿರಿಯ ಶಾಸಕನಾಗಿದ್ದು, ಸಚಿವನಾಗುವ ಆಸೆ ಮತ್ತು ನಿರೀಕ್ಷೆಯೂ ಇದೆ.  ಆದರೆ, ಅದಕ್ಕಾಗಿ ಲಾಬಿ ಮಾಡಲ್ಲ, ಸಚಿವ ಸ್ಥಾನ ಕೊಟ್ಟರೆ ರಾಜ್ಯ ಸೇವೆ, ಕೊಡದಿದ್ದರೆ ಕ್ಷೇತ್ರ ಸೇವೆ ಮಾಡುತ್ತೇವೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ನಾನು ಸಚಿವನಾಗುವ ಇಚ್ಚೆ ಇದೆ. ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಅದಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ ಎಂದರು.

ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಎಂಬಿ ಪಾಟೀಲ್ ಕುರಿತು ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ ಅದು, ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. 

LEAVE A REPLY

Please enter your comment!
Please enter your name here