Home Uncategorized ಸೌಜನ್ಯ ಪ್ರಕರಣ: ಕುಟುಂಬಸ್ಥರ ಪರ ಧ್ವನಿ ಎತ್ತಿದ ನಟ ದುನಿಯಾ ವಿಜಯ್

ಸೌಜನ್ಯ ಪ್ರಕರಣ: ಕುಟುಂಬಸ್ಥರ ಪರ ಧ್ವನಿ ಎತ್ತಿದ ನಟ ದುನಿಯಾ ವಿಜಯ್

21
0

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಕುರಿತು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಬಿಡುಗಡೆ ಬಳಿಕ ಮತ್ತೆ ಎಸ್ ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ವಿವಿಧ ಜನಪರ ಸಂಘಟನೆಗಳು ಒತ್ತಾಯಿಸುತ್ತಿವೆ. ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಕುರಿತು 11 ವರ್ಷಗಳ ಕಾಲ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಬಿಡುಗಡೆ ಬಳಿಕ ಮತ್ತೆ ಎಸ್ ಐಟಿ ರಚಿಸಿ ಮರು ತನಿಖೆಗೆ ಒಳಪಡಿಸುವಂತೆ ವಿವಿಧ ಜನಪರ ಸಂಘಟನೆಗಳು ಒತ್ತಾಯಿಸುತ್ತಿವೆ.

ಇದೇ ರೀತಿಯಲ್ಲಿ ಸೌಜನ್ಯ ಮತ್ತು ಕುಟುಂಬಸ್ಥರ ಪರ ನಟ ದುನಿಯಾ ವಿಜಯ್ ಕೂಡಾ ಧ್ವನಿ ಎತ್ತಿದ್ದಾರೆ. ಸೌಜನ್ಯ ಹಾಗೂ ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಮಾಡಕೂಡದ ಅನಿಸುತ್ತದೆ ಎಂದಿದ್ದಾರೆ. 

ಇದನ್ನೂ ಓದಿ: ಸೌಜನ್ಯ ಪ್ರಕರಣ ಮೇಲ್ಮನವಿ ಸಲ್ಲಿಸುವ ಬಗ್ಗೆ ಪರಿಶೀಲನೆ, ನೈತಿಕ ಪೊಲೀಸ್‌ ಗಿರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.

ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ#Justiceforsoujanya pic.twitter.com/wlxF84dHY4
— Duniya Vijay (@OfficialViji) August 1, 2023

#Justice for Soujanya ಎಂಬ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು ಎಂದು ಭಗವನ್ ಬುದ್ದನ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ. 

LEAVE A REPLY

Please enter your comment!
Please enter your name here