Home Uncategorized ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

25
0

ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ… ಮೈಸೂರು: ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ಶುಕ್ರವಾರ ಗುಜರಾತ್ ನಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಟ್ರೋ ರವಿಯನ್ನು ಮೈಸೂರು ಪೊಲೀಸರು ಇಂದು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಇದನ್ನು ಓದಿ: ‘ಸ್ಯಾಂಟ್ರೋ’ ರವಿಗೆ ಪ್ರತಿ ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ: ಎಡಿಜಿಪಿ ಅಲೋಕ್ ಕುಮಾರ್

ವಿಚಾರಣೆ ನಡೆಸಿದ ಗುರುರಾಜ್‌ ಸೋಮಕ್ಕಲವರ್ ಅವರು ಆರೋಪಿಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಗಾಗಿ ಬಲೆ ಬೀಸಿದ ಮೈಸೂರು ಪೊಲೀಸರು ನಿನ್ನೆ ಗುಜರಾತ್ ನಲ್ಲಿ ಬಂಧಿಸಿದ್ದರು.

LEAVE A REPLY

Please enter your comment!
Please enter your name here