Home Uncategorized 'ಸ್ಯಾಂಟ್ರೋ ರವಿ' ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ: ಎಡಿಜಿಪಿ

'ಸ್ಯಾಂಟ್ರೋ ರವಿ' ಬಂಧನಕ್ಕೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ: ಎಡಿಜಿಪಿ

18
0
Advertisement
bengaluru

ಅತ್ಯಾಚಾರ ಮತ್ತಿತರ ಆರೋಪ ಎದುರಿಸುತ್ತಿರುವ ‘ಸ್ಯಾಂಟ್ರೋ’ ರವಿ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ. ಮೈಸೂರು: ಅತ್ಯಾಚಾರ ಮತ್ತಿತರ ಆರೋಪ ಎದುರಿಸುತ್ತಿರುವ ‘ಸ್ಯಾಂಟ್ರೋ’ ರವಿ ಬಂಧನಕ್ಕೆ ಲುಕ್ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಪ್ರಕರಣದ ದೂರುದಾರರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಯಾವುದೇ ಒತ್ತಡವಿಲ್ಲ.  ವಿಜಯನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ. ಆತನ ಬಂಧನಕ್ಕೆ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ. ಶೀಘ್ರದಲ್ಲೇ ಸ್ಯಾಂಟ್ರೋ ರವಿ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ರವಿ ತಲೆಮರೆಸಿಕೊಂಡು ಎಂಟು ದಿನಗಳು ಕಳೆದಿವೆ. ಆತನ ಬಂಧನಕ್ಕೆ ತಂಡಗಳನ್ನು ರಚನೆ ಮಾಡಲಾಗಿದೆ. ಮೈಸೂರು, ಮಂಡ್ಯ, ರಾಮನಗರ ಮತ್ತು ಬೆಂಗಳೂರಿನಲ್ಲಿ ಆತನ ಪತ್ತೆಗೆ ತಂಡಗಳು ಶೋಧ ನಡೆಸುತ್ತಿದ್ದು, ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಆತನ ಮನೆಯಲ್ಲೂ ಶೋಧ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ರವಿ ಬ್ಯಾಂಕ್ ಖಾತೆಗಳು ಮತ್ತು ಇತರ ವಿವರಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆಯ ಅಂಶಗಳನ್ನು ಸಹ ಪರಿಶೀಲಿಸುತ್ತಿದ್ದೇವೆ, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತೆಯೊಬ್ಬರು ತಮ್ಮ ಬಳಿಯಿದ್ದ ಎಲ್ಲಾ ಸಾಕ್ಷ್ಯಾಧಾರಗಳನ್ನು ಪೊಲೀಸರಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

bengaluru bengaluru

ಏತನ್ಮಧ್ಯೆ, ರವಿ ಅಂಡಮಾನ್‌ಗೆ ಪರಾರಿಯಾಗಿರುವ ಶಂಕೆಗಳು ವ್ಯಕ್ತವಾಗಿವೆ ಎಂದು ತನಿಖೆಯ ನಿಕಟ ಮೂಲಗಳು ಮಾಹಿತಿ ನೀಡಿವೆ.

ಆರೋಪಿಯು ತನ್ನ ವಕೀಲರಿಗೆ ಲಭ್ಯವಿದ್ದಾನೆ ಮತ್ತು ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾನೆ, ಆದರೆ ಪೊಲೀಸರಿಗೆ ಅವನನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ” ಎಂದು ಸಂತ್ರಸ್ತೆಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಎಡಿಜಿಪಿಯನ್ನು ಭೇಟಿಯಾದ ಸಂತ್ರಸ್ತೆಯೊಬ್ಬರು ತಮ್ಮ ಬಳಿ ಇದ್ದ ಎಲ್ಲ ಸಾಕ್ಷ್ಯಗಳನ್ನು ಪೊಲೀಸರಿಗೆ ತೋರಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.


bengaluru

LEAVE A REPLY

Please enter your comment!
Please enter your name here