Home Uncategorized ಸ್ಯಾಂಡಲ್ ವುಡ್ ನಟ ಯಶ್ ಬರ್ತ್ ಡೇ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಆಘಾತ; ...

ಸ್ಯಾಂಡಲ್ ವುಡ್ ನಟ ಯಶ್ ಬರ್ತ್ ಡೇ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಆಘಾತ; ಮೂವರು ಮೃತ್ಯು

7
0

ಗದಗ: ಕನ್ನಡ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.

ಮೃತರನ್ನು ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಮಾಡಿಕೊಂಡಿದ್ದ ಸೂರಣಗಿ ಗ್ರಾಮದ 10ಕ್ಕೂ ಹೆಚ್ಚು ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿ ದುರ್ಘಟನೆ ಸಂಭವಿಸಿದೆ.

LEAVE A REPLY

Please enter your comment!
Please enter your name here