ಬೆಂಗಳೂರು: ಸ್ವಚ್ಛತೆ ಕಾಯ್ದುಕೊಳ್ಳದ ಜಯನಗರ ಪೂರ್ವ ಭಾಗದಲ್ಲಿರುವ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕ್ರಮ ಕೈಗೊಂಡಿದ್ದು, ಭಾರಿ ಮೊತ್ತದ ದಂಡ ವಿಧಿಸಿದೆ.
ಶುಚಿತ್ವ ಕಾಯ್ದುಕೊಳ್ಳದೆ ಇರುವುದು ಹಾಗೂ ತ್ಯಾಜ್ಯ ವಿಂಗಡಣೆ ಮಾಡದ ಹಿನ್ನೆಲೆಯಲ್ಲಿ ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣಾ (ಎಸ್ಡಬ್ಲ್ಯೂಎಂ) ತಂಡ ಹೋಟೆಲ್’ಗೆ ರೂ.1 ಲಕ್ಷ ದಂಡ ವಿಧಿಸಿದೆ.
ಹೋಟೆಲ್ನಲ್ಲಿ ಸ್ವಚ್ಛತಾ ನಿಯಮ ಪಾಲನೆಯಲ್ಲಿ ಗಂಭೀರ ಉಲ್ಲಂಘನೆಗಳು ಕಂಡು ಬಂದಿದ್ದು, ತ್ಯಾಜ್ಯ ವಿಂಗಡಣೆಯಲ್ಲೂ ನಿಯಮ ಪಾಲಿಸದಿರುವುದು ಕಂಡು ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸ್ಥಳದಲ್ಲೇ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ. ನಿಯಮ ಉಲ್ಲಂಘಿಸಿದ ಯಾವುದೇ ಸಂಸ್ಥೆ ಅಥವಾ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Penalty Alert in Jayanagar!
Today, our swm team penalized Star Ambur Biriyani (Jayanagar East) ₹1,00,000/- for:
❌ Severe unhygienic conditions
❌ Non-segregation of wasteRules are for everyone. Let’s keep Bengaluru clean & healthy! ✨
#CleanBengaluru #Jayanagar pic.twitter.com/EGu0oWr5fk
— Bengaluru South City Corporation ಬೆಂ.ದ.ನಗರ ಪಾಲಿಕೆ (@comm_blr_south) February 17, 2026
