ಬೆಂಗಳೂರು: 2006 ಎಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ ರಾಜ್ಯ ಸರಕಾರದ ಸುಮಾರು 13,000 ಸರಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಸರಕಾರ ಆದೇಶ ಹೊರಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಚುನಾವಣೆಗೂ ಪೂರ್ವದಲ್ಲಿ ಎನ್‍ಪಿಎಸ್ ನೌಕರರು ಮುಷ್ಕರ ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಲಾಗಿತ್ತು, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
ಎಲ್ಲ 13,000 ಎನ್‍ಪಿಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಅವರು ತಿಳಿಸಿದ್ದಾರೆ.
2006 ಏಪ್ರಿಲ್ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.
ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ… pic.twitter.com/ZhRg9SJzx7
— CM of Karnataka (@CMofKarnataka) January 24, 2024