ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ… ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಡಿ. ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇದನ್ನು ಓದಿ: ರೂಪಾ- ರೋಹಿಣಿಗೆ ಬುದ್ಧಿ ಹೇಳಿ: ಪ್ರಧಾನಿ ಮೋದಿ, ಅಮಿತ್ ಶಾಗೆ ಜಗ್ಗೇಶ್ ಮನವಿ
ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.