ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ಹಾವೇರಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಂತ್ರದ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ದುಂಢಸಿ ಗ್ರಾಮದ ನವೀನ ಬಸಪ್ಪ ಚಲವಾದಿ(19 ವರ್ಷ) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಕಬ್ಬು ತುಂಬುವ ಯಂತ್ರದ ಬೆಲ್ಟಿಗೆ ನವೀನನ ಎರಡು ಕೈಗಳು ಸಿಲುಕಿ ತುಂಡಾಗಿ, ತೀವ್ರ ರಕ್ತಸ್ರಾವದಿಂದ ಕಾರ್ಮಿಕ ನವೀನ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ಹಾಸನ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ದಂಪತಿ, ಇಬ್ಬರು ಮಕ್ಕಳು ಸಾವು
ಕಾರ್ಖಾನೆಯಲ್ಲಿ ಯಾವುದೇ ಸುರಕ್ಷತಾ ಕ್ರಮವಿರಲಿಲ್ಲ
“ಕೋಣನಕೇರಿಯ ವಿಐಪಿಎನ್ ಡಿಸ್ಟಿಲರಿ ಕಾರ್ಖಾನೆಯಲ್ಲಿ ಯಾವುದೇ ಸುರಕ್ಷಾ ಕ್ರಮವಿಲ್ಲದೇ, ದೊಡ್ಡ ದೊಡ್ಡ ಯಂತ್ರಗಳ ಬೆಲ್ಟ್ ಹತ್ತಿರ ಕೌಶಲರಹಿತ ಕಾರ್ಮಿಕನಿಂದ ಬುಟ್ಟಿಯಿಂದ ಕಬ್ಬಿನ ಪುಡಿಯನ್ನು ತುಂಬಿ ಹಾಕಿಸಲಾಗುತ್ತಿತ್ತು. ಸ್ಥಳದಲ್ಲಿ ಯಾವುದೇ ಜಾಲರಿ, ಸುರಕ್ಷಾ ಕ್ರಮಗಳಿಲ್ಲದ ಕಾರಣ ಈ ದುರ್ಘಟನೆ ನಡೆದಿದೆ” ಎಂದು ಮೃತನ ಸಂಬಂಧಿಗಳು ದೂರಿದ್ದಾರೆ.
ಇದನ್ನೂ ಓದಿ: ಪತಿ-ಪತ್ನಿ ನಡುವೆ ಜಗಳ: ಅತ್ತೆ ಕತ್ತು ಕೊಯ್ದು ಹತ್ಯೆಗೈದ ಅಳಿಯ
ಕಾರ್ಖಾನೆ ಮಾಲೀಕ ವಿವೇಕ ಹೆಬ್ಬಾರ್, ಜನರಲ್ ಮ್ಯಾನೇಜರ್ ಮಂಜುನಾಥ, ಲೇಬರ್ ಸಪ್ಲೈರ್ಗಳಾದ ಬಸವರಾಜ, ಉಮೇಶ ಸುರವೇ, ವಿಶ್ವನಾಥ ಎ.ಎಸ್, ಆಕಾಶ ಧರ್ಮೋಜಿ ಸೇರಿದಂತೆ 6 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.