Home Uncategorized ಹಾಸನ: ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

ಹಾಸನ: ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

36
0

ಹಾಸನ: ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೇಲೂರು ತಾಲ್ಲೂಕಿನ ಮತ್ತಾವರದಲ್ಲಿ ಗುರುವಾರ ಸಂಜೆ ನಡೆದಿದೆ.

ಮತ್ತಾವರ ಗ್ರಾಮದ ವಸಂತ (43) ಮೃತಪಟ್ಟವರು.

ಸಂಜೆಯ ವೇಳೆ ತೋಟದ ಮನೆಯಲ್ಲಿದ್ದ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವಸಂತ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆನೆ ದಾಳಿಗೆ ನಿರಂತರವಾಗಿ ಸಾವುಗಳು ಸಂಭವಿಸುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here