Home Uncategorized ಹಾಸನ: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ, ಇಬ್ಬರಿಗೆ ಚಾಕು ಇರಿತ

ಹಾಸನ: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ, ಇಬ್ಬರಿಗೆ ಚಾಕು ಇರಿತ

29
0

ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ ಸಂಭವಿಸಿ ಇಬ್ಬರಿಗೆ ಇರಿದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ ಸಂಭವಿಸಿ ಇಬ್ಬರಿಗೆ ಇರಿದಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಚನ್ನರಾಯಪಟ್ಟಣದ ಮೇಗಳಕೇರಿಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ರಾಮನವಮಿ (Rama Navami) ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ (Jamia Masjid Road) ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. 

ಇದನ್ನೂ ಓದಿ: ಬೆಂಗಳೂರು: ವಿಕೋಪಕ್ಕೆ ತಿರುಗಿದ ಶ್ರೀರಾಮನವಮಿ ಆಚರಣೆ; ಯಲಹಂಕ ಪ್ರೆಸಿಡೆನ್ಸಿ ಕಾಲೇಜು ಮಂಡಳಿ ವಿರುದ್ಧ ಪ್ರತಿಭಟನೆ

ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆವಹಿಸಿ ಜಿಲ್ಲೆಯ ವಿವಿಧ ಭಾಗಗಳಿಂದ ಪೊಲೀಸರ ನಿಯೋಜನೆ ಮಾಡಲಾಗಿದೆ. ಚಾಕು ಇರಿತ ಘಟನೆಗೆ ವೈಯುಕ್ತಿಕ ದ್ವೇಷ ಕಾರಣ ಎಂದು ಪೊಲೀಸ್ ಮೂಲಗಳು ಹೇಳಿದ್ದು, ಮೆರವಣಿಗೆ ವೇಳೆ ಯುವಕರ ಗುಂಪು ಶ್ರೀರಾಮನ ಬಗ್ಗೆ ಘೋಷಣೆಗಳನ್ನು ಕೂಗಿದೆ.

ಇದನ್ನೂ ಓದಿ: ಮುಂಬೈನಲ್ಲಿ ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ; 21 ಮಂದಿ ಬಂಧನ, 300 ಮಂದಿ ವಿರುದ್ಧ ಪ್ರಕರಣ ದಾಖಲು

ಈ ವೇಳೆ ನಿರ್ದಿಷ್ಟ ಸಮುದಾಯದ ಯುವಕರ ಗುಂಪು ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಾರೆ. ಈ ವೇಳೆ ಎರಡೂ ಸಮುದಾಯದ ಯುವಕರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಕೈಕೈ ಮಿಲಾಯಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.

ಬಳಿಕ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಯುವಕರಿಗೆ ಚಾಕುವಿನಿಂದ ಇರಿದ ಸಲ್ಮಾನ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
 

LEAVE A REPLY

Please enter your comment!
Please enter your name here