Home Uncategorized ಹಿಟ್ ಆ್ಯಂಡ್ ರನ್ ಕೇಸ್: ಯಾದಗಿರಿ ಮೂಲದ ಇಬ್ಬರು ಯುವಕರ ಸಾವು

ಹಿಟ್ ಆ್ಯಂಡ್ ರನ್ ಕೇಸ್: ಯಾದಗಿರಿ ಮೂಲದ ಇಬ್ಬರು ಯುವಕರ ಸಾವು

20
0

ಹೊಸ ವರ್ಷ ಆಚರಿಸಲು ಕೇಕ್ ಖರೀದಿಸಲು ತೆರಳುತ್ತಿದ್ದ ಇಬ್ಬರು ಯುವಕರು ದ್ವಿಚಕ್ರ ವಾಹನಕ್ಕೆ ಮಿನಿ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ಬೆಂಗಳೂರು: ಹೊಸ ವರ್ಷ ಆಚರಿಸಲು ಕೇಕ್ ಖರೀದಿಸಲು ತೆರಳುತ್ತಿದ್ದ ಇಬ್ಬರು ಯುವಕರು ದ್ವಿಚಕ್ರ ವಾಹನಕ್ಕೆ ಮಿನಿ ಟ್ರಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಯಾದಗಿರಿ ಮೂಲದ ದೇವರಾಜ್ (21) ಮತ್ತು ದೇವೇಂದ್ರಪ್ಪ (19) ಎಂದು ಗುರುತಿಸಲಾಗಿದೆ.

ಹೊಸಕೆರೆಹಳ್ಳಿ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಅವರು, ಕಟ್ಟಡ ನಿರ್ಮಾಣ ಸ್ಥಳದಲ್ಲಿ ಶೆಡ್‌ನಲ್ಲಿ ವಾಸವಾಗಿದ್ದರು.

ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ಹೊಸ ವರ್ಷವನ್ನು ಆಚರಿಸಲು ಕೇಕ್ ಖರೀದಿಸಲು ಇಬ್ಬರೂ ಸಿಟಿ ಮಾರ್ಕೆಟ್ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಮೈಸೂರು ರಸ್ತೆಯ ಗೋಪಾಲನ್ ಮಾಲ್ ಬಳಿ ಸಾಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಅವರ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಮಾರ್ಗದ ಮಧ್ಯೆ ದೇವರಾಜ್ ಮೃತಪಟ್ಟಿದ್ದಾರೆ. ದೇವೇಂದ್ರಪ್ಪ ಅವರು ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದೇವೆ. ಲಾರಿ ಮತ್ತು ಚಾಲಕನಿಗಾಗಿ ಹುಡುಕಾಟ ಆರಂಭವಾಗಿದೆ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ಹೇಳಿದ್ದಾರೆ.

LEAVE A REPLY

Please enter your comment!
Please enter your name here