Home Uncategorized ಹಿರಿಯ ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ಹಿರಿಯ ತಮಿಳು ನಟ, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

32
0

ಚೆನ್ನೈ, ಡಿ.28: ತಮಿಳುನಾಡಿನ ಡಿಎಂಡಿಕೆ ನಾಯಕ ಹಾಗೂ ಖ್ಯಾತ ಹಿರಿಯ ನಟ ವಿಜಯಕಾಂತ್ ಇಂದು ಬೆಳಗ್ಗೆ ಚೆನ್ನೈಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಆರೋಗ್ಯ ತಪಾಸಣೆಗಾಗಿ ಮಂಗಳವಾರ ಚೆನ್ನೈಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಜಯಕಾಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಎದುರಾಗಿದ್ದರಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

LEAVE A REPLY

Please enter your comment!
Please enter your name here