ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.
ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ನಿನ್ನೆ ಆದೇಶ ನೀಡಿತ್ತು.
ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಹಿಂಡಲಗಾ ಕಾರಾಗೃಹದಲ್ಲಿರಿಸಲಾಗಿತ್ತು.
ಇಂದು ವಿನಯ್ ಕುಲಕರ್ಣಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ ಸಿಬಿಐ ಅಧಿಕಾರಿಗಳು ಬಳಿಕ ಅವರನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.ಮೂರು ದಿನಗಳವರೆಗೆ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ.
ಶುಕ್ರವಾರ ವಿನಯ್ ಅವರನ್ನು ಹಿಂಡಲಗಾ ಕಾರಾಗೃಹಕ್ಕೆ ಕರೆತರಲಾಗಿತ್ತು. ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು. ಹೀಗಾಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಜೈಲಿನ ಅಧಿಕಾರಿಗಳ ಮುಂದೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು ಪ್ರಕ್ರಿಯೆ ಅಂತ್ಯಗೊಳಿಸಿದ ಬಳಿಕವೇ ವಿನಯ್ ಅವರನ್ನು ವಶಕ್ಕೆ ಪಡೆದಿದ್ದಾರೆ.