Home ಕರ್ನಾಟಕ ಹುಬ್ಬಳ್ಳಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಬಂಧನ

ಹುಬ್ಬಳ್ಳಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಬಂಧನ

10
0

ಹುಬ್ಬಳ್ಳಿ : ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದರು.

ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, “ಅಪ್ರಾಪ್ತೆ ಮೇಲೆ ಅತ್ಯಾಚಾರವಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ನಾವು ಕೂಡಲೇ ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಿದ್ದೇವೆ” ಎಂದರು.

ಪ್ರಕರಣದ ಸಂಬಂಧ ಆರೋಪಿ ಸದ್ದಾಂ ಹುಸೇನ್ (19) ಎಂಬಾತನನ್ನು ದಸ್ತಗಿರಿ ಮಾಡಿದ್ದೆವೆ. ಹುಡುಗಿಯು ಅಪ್ರಾಪ್ತಳಾಗಿದ್ದು ಎಸ್ ಟಿ ಸಮುದಾಯಕ್ಕೆ ಸೇರಿದ್ದಾರೆ. ಹೀಗಾಗಿ ಆರೋಪಿ ಮೇಲೆ ಜಾತಿ ನಿಂದನೆ ಪ್ರಕರಣ ಸಹ ದಾಖಲಾಗಿದೆ. ಆರೋಪಿ ವಿರುದ್ದ ಸೂಕ್ತ ಕ್ರಮ ಜರಗಿಸುತ್ತವೆ ಎಂದರು.

LEAVE A REPLY

Please enter your comment!
Please enter your name here