Home Uncategorized ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌‌ಗಳನ್ನು ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿ ಬಂಧನ

ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿನಿಯರ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌‌ಗಳನ್ನು ಅಪ್ಲೋಡ್ ಮಾಡುತ್ತಿದ್ದ ವ್ಯಕ್ತಿ ಬಂಧನ

23
0

ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಹುಬ್ಬಳ್ಳಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳನ್ನು ಅಪ್ಲೋಡ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂಧಿತನನ್ನು ರಜನಿಕಾಂತ್ ಎಂದು ಗುರುತಿಸಲಾಗಿದ್ದು, ಇದೇ ಕಾಲೇಜಿನ ಹಳೆ ವಿದ್ಯಾರ್ಥಿ ಎನ್ನಲಾಗಿದೆ.

ಕಡಿಮೆ ಹಾಜರಾತಿಯಿಂದಾಗಿ ರಜನಿಕಾಂತ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡದ ಕಾರಣ, ‘ಕಾಶ್ಮೀರಾ1990_0’ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿದ ಆತ, ಆ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರ ಬಗ್ಗೆ ಅಸಭ್ಯ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿದ್ದಾನೆ.

ಅಲ್ಲದೆ, ಸಾಧ್ಯವಾದರೆ ತನ್ನನ್ನು ಹಿಡಿಯಲಿ ಎಂದು ಆರೋಪಿ ಪೊಲೀಸರಿಗೆ ಸವಾಲು ಹಾಕಿದ್ದನು.

ತಮ್ಮ ಫೋಟೊಗಳನ್ನು ಅಪ್ಲೋಡ್ ಮಾಡಿರುವ ಕುರಿತು ವಿದ್ಯಾರ್ಥಿನಿಯರು ಜೂನ್ 20 ಕಾಲೇಜು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ, ಅವರ ದೂರನ್ನು ನಿರ್ಲಕ್ಷಿಸಿದ್ದರಿಂದ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿದ ನಂತರ, ಆರೋಪಿ Instagram ನಲ್ಲಿ ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದಾನೆ.

‘ಆರೋಪಿಯು ಈ ಘಟನೆಗೆ ಕೋಮು ಬಣ್ಣ ಬಳಿಯಲು ಪ್ರಯತ್ನಿಸಿದ್ದನು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟಿಪ್ಪು ಸುಲ್ತಾನ್ (ಮೈಸೂರಿನ ಹಿಂದಿನ ದೊರೆ)ಗೆ ನಮಸ್ಕಾರ ಮಾಡುತ್ತಿರುವ ಫೋಟೊಗಳನ್ನು ಸಹ ಅಪ್ಲೋಡ್ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪೋಸ್ಟ್‌ಗಳು ವೈರಲ್ ಆಗಿದ್ದು, ಹುಬ್ಬಳ್ಳಿಯ ಪೋಷಕರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಪೊಲೀಸರು ಕಾಲೇಜಿನ ಪ್ರಾಂಶುಪಾಲರ ಹೇಳಿಕೆ ಪಡೆದಿದ್ದು, ವಿದ್ಯಾರ್ಥಿಗಳ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here