ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಸದಸ್ಯನನ್ನು ಪೊಲೀಸರು ಬಂಧಿಸಿರುವ ಘಟನೆ ಕಮರಿಪೇಟೆಯಲ್ಲಿ ನಡೆದಿದೆ.
ಆರೋಪಿಯನ್ನು ಅನ್ವರ್ ಮುಜಾಹಿದ್ ಎಂದು ಗುರುತಿಸಲಾಗಿದೆ. ಕಮರಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆಯೊಂದರಲ್ಲಿ ಡಿ.23 ಶನಿವಾರದಂದು ಮಧ್ಯಾಹ್ನ ಊಟದ ಸಮಯದಲ್ಲಿ ಮುಜಾಹಿದ್ ಬಾಲಕಿಯರ ಮೈ ಕೈ ಮುಟ್ಟಿದ್ದ ಎಂದು ಆರೋಪಿಸಲಾಗಿದೆ.
ಘಟನೆಯ ಬಗ್ಗೆ ಶಾಲೆಗೆ ಬಂದು ಶಿಕ್ಷಕರನ್ನು ತರಾಟೆಗೆ ತಗೆದುಕೊಂಡಿದ್ದ ಪೋಷಕರು ಕಮರಿಪೇಟೆ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.