Home Uncategorized ಹೆಬ್ರಿ | ಕಾರು ಢಿಕ್ಕಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತ್ಯು

ಹೆಬ್ರಿ | ಕಾರು ಢಿಕ್ಕಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮೃತ್ಯು

40
0

ಹೆಬ್ರಿ, ಜ.1: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಚಾರ ಗ್ರಾಮದ ಕನ್ಯಾನ ಶಾಲೆಯ ಬಳಿ ರವಿವಾರ ರಾತ್ರಿ ವೇಳೆ ನಡೆದಿದೆ.

ಮೃತರನ್ನು ಜಯಂತ ಬೋರೋ(25) ಎಂದು ಗುರುತಿಸಲಾಗಿದೆ. ಕನ್ಯಾನ ಕಡೆಯಿಂದ ಶಿವಪುರ ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ಬದಿ ಇತರರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಜಯಂತ್ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಜಯಂತರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ದಾರಿಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here