Home Uncategorized ಹೈಕಮಾಂಡ್‍ನಿಂದ ನಿಗಮ, ಮಂಡಳಿಗಳ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಹೈಕಮಾಂಡ್‍ನಿಂದ ನಿಗಮ, ಮಂಡಳಿಗಳ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

19
0

ಬೆಂಗಳೂರು: ನಿಗಮ ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಾಸಕರ ನೇಮಕಾತಿ ಪೂರ್ಣಗೊಂಡಿದೆ. ಆದರೆ, ಪಕ್ಷದ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಗೊಂದಲವಿತ್ತು. ಈ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೊತೆ ಚರ್ಚಿಸಿ ಅಂತಿಮ ಪಟ್ಟಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ಅವರಿಗೆ ಕಳುಹಿಸಿದ್ದೇವೆ. ಈ ಅಂತಿಮ ಪಟ್ಟಿಗೆ ಕಾಂಗ್ರೆಸ್ ಮುಖಂಡ ಕೆ.ಸಿ.ವೇಣುಗೋಪಾಲ್ ಅಂಕಿತ ಹಾಕಬೇಕಿದೆ ಎಂದು ಹೇಳಿದರು..

ಈ ನೇಮಕ ಪ್ರಕ್ರಿಯೆ ಸಂಬಂಧ ಎಲ್ಲರ ಜೊತೆಗೂ ಚರ್ಚೆ ಮಾಡಲು ಸಾಧ್ಯವಿಲ್ಲ. ಈ ಮೊದಲು ಅವರ ಜೊತೆಗೂ ಚರ್ಚಿಸಿದ್ದೇವೆ ಎಂದೂ ಅವರು ಹೇಳಿದರು.

LEAVE A REPLY

Please enter your comment!
Please enter your name here