Home Uncategorized ಹೊಸ ವರ್ಷಾಚರಣೆ: ಎಂ.ಎಸ್.ಐ.ಎಲ್ ನಿಂದ ಒಂದೇ ದಿನ 18.85 ಕೋಟಿ ಮೊತ್ತದ ಮದ್ಯ ಮಾರಾಟ

ಹೊಸ ವರ್ಷಾಚರಣೆ: ಎಂ.ಎಸ್.ಐ.ಎಲ್ ನಿಂದ ಒಂದೇ ದಿನ 18.85 ಕೋಟಿ ಮೊತ್ತದ ಮದ್ಯ ಮಾರಾಟ

8
0

ಬೆಂಗಳೂರು: ರಾಜ್ಯದಲ್ಲಿರುವ 1031 ಎಂ.ಎಸ್.ಐ.ಎಲ್ ಮದ್ಯ ಮಾರಾಟ ಮಳಿಗೆಗಳಲ್ಲಿ 2023ರ ಕೊನೆಯ ದಿನವಾದ ಭಾನುವಾರ (ಡಿ.31) 18.85 ಕೋಟಿ ಮೊತ್ತದ ದಾಖಲೆಯ ಮದ್ಯ ಮಾರಾಟವಾಗಿದೆ ಎಂದು ಎಂ.ಎಸ್.ಐ.ಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ತಿಳಿಸಿದ್ದಾರೆ.

ಕಳೆದ ವರ್ಷದ ಇದೇ ದಿನಕ್ಕೆ ಹೋಲಿಸಿದರೆ, ಅದು ಸುಮಾರು 4.34 ಕೋಟಿ ಹೆಚ್ಚಳವಾಗಿದೆ. 2022ರ ಡಿ. 31ರಂದು 14.51 ಕೋಟಿ ಮೊತ್ತದ ಮದ್ಯ ಮಾರಾಟವಾಗಿತ್ತು ಎಂದು ಅವರು ಹೇಳಿದ್ದಾರೆ.

ರಾಯಚೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಮಳಿಗೆಯಲ್ಲಿ ಅತ್ಯಂತ ಹೆಚ್ಚು, ಅಂದರೆ 11.66 ಲಕ್ಷ ರೂ. ಮೊತ್ತದ ಮದ್ಯ ಮಾರಾಟವಾಗಿದ್ದರೆ, ಅದೇ ನಗರದ ಗಂಝ್ ರಸ್ತೆಯ ಮಳಿಗೆಯಲ್ಲಿ 9.96 ಲಕ್ಷದ ಮದ್ಯ ಬಿಕರಿಯಾಗಿ ಎರಡನೇ ಸ್ಥಾನದಲ್ಲಿದೆ. ಜಿಲ್ಲಾವಾರು ಮಾರಾಟದಲ್ಲಿ, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ, ಅಂದರೆ 1.82 ಕೋಟಿಯ ಮದ್ಯ ಮಾರಾಟ ಕಂಡಿದೆ. ಕಳೆದ ವರ್ಷದ ಇದೇ ದಿನ ಈ ಜಿಲ್ಲೆಯಲ್ಲಿ ರೂ 1.35 ಕೋಟಿಯ ಮದ್ಯ ಮಾರಾಟವಾಗಿತ್ತು.

LEAVE A REPLY

Please enter your comment!
Please enter your name here