Home Uncategorized ಹೊಸ ವರ್ಷಾಚರಣೆ| ಬೆಂಗಳೂರಿನ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮ ಪಾಲಿಸಿ: ಸಚಿವ ದಿನೇಶ್ ಗುಂಡೂರಾವ್

ಹೊಸ ವರ್ಷಾಚರಣೆ| ಬೆಂಗಳೂರಿನ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗೃತ ಕ್ರಮ ಪಾಲಿಸಿ: ಸಚಿವ ದಿನೇಶ್ ಗುಂಡೂರಾವ್

31
0

ಬೆಂಗಳೂರು: ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಗರದಲ್ಲಿರುವ ಜನಸಂದಣಿ ಪ್ರದೇಶಗಳಲ್ಲಿ ಕೋವಿಡ್ ಮುಂಜಾಗೃತ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಪತ್ರ ಬರೆದಿರುವ ಅವರು, ಪ್ರಸ್ತುತ ರಾಜ್ಯದಲ್ಲಿ 464 ಸಕ್ರಿಯ ಕೋವಿಡ್ ಪ್ರಕರಣಗಳ ಪೈಕಿ 376 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. ರಾಜ್ಯದಲ್ಲಿ ಈವರೆಗೆ ವರದಿಯಾಗಿರುವ ಜೆನ್.1 ಪ್ರಕರಣಗಳ ಪೈಕಿ 21 ಪ್ರಕರಣಗಳು ಬೆಂಗಳೂರು ನಗರದ್ದಾಗಿದೆ ಎಂದು ತಿಳಿಸಿದ್ದಾರೆ.

ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ನಗರದಲ್ಲಿರುವ ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಹ್ಯಾಂಡ್ ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸಬೇಕು. ಈಗಾಗಲೇ ಸಾರ್ವಜನಿಕರಿಗೆ ಸಲಹಾ ಪತ್ರದಲ್ಲಿ ತಿಳಿಸಿರುವಂತೆ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸಬೇಕು ಎಂದಿದ್ದಾರೆ.

LEAVE A REPLY

Please enter your comment!
Please enter your name here